ಧರ್ಮೋಪದೇಶಕಾಂಡ 26:12

ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 26

10ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.

11ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.

12ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ.

13ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ.

14ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.

ಧರ್ಮೋಪದೇಶಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी