ಅಪೊಸ್ತಲರ ಕೃತ್ಯಗಳು 25:6

ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 25

4ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು.

5ಆದಕಾರಣ ನಿಮ್ಮಲ್ಲಿ ಸಾಮರ್ಥ್ಯವುಳ್ಳವರು ನನ್ನೊಂ ದಿಗೆ ಬಂದು ಅವನಲ್ಲಿ ದುಷ್ಟತನವೇನಾದರೂ ಇದ್ದರೆ ಅವನ ಮೇಲೆ ತಪ್ಪು ಹೊರಿಸಲಿ ಎಂದು ಅವನು ಹೇಳಿದನು.

6ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.

7ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.

8ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.

ಅಪೊಸ್ತಲರ ಕೃತ್ಯಗಳು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी