ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
10ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
11ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
12ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
13ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು
14ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ