ರೋಮಾಪುರದವರಿಗೆ 5:13

(ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 5

11ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.

12ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.

13(ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.

14ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.

15ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.

ರೋಮಾಪುರದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी