ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;
8ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
9ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
10ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;
11ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ