ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು?
15ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
16ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
17ಅವರಿಗೆ ಕಿವಿಗೊಡ ಬೇಡಿರಿ; ಬಾಬೆಲಿನ ಅರಸನಿಗೆ ಸೇವೆಮಾಡಿ ಬದುಕಿರಿ; ಈ ಪಟ್ಟಣವು ಯಾಕೆ ಹಾಳಾಗಬೇಕು?
18ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.
19ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ