ಯಾಜಕಕಾಂಡ 25:32

ಇದಲ್ಲದೆ ಲೇವಿಯರ ಪಟ್ಟಣಗಳ ವಿಷಯವಾ ಗಿಯೂ ಅವರ ಸ್ವಾಸ್ತ್ಯವಾಗಿರುವ ಪಟ್ಟಣಗಳಲ್ಲಿನ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 25

30ಆದರೆ ವರುಷವು ಪೂರ್ಣವಾಗುವದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೆ ಅವನ ತಲತಲಾಂತರಕ್ಕೂ ಸ್ಥಿರವಾಗಿಡಲ್ಪಡಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆಯಾಗ ಬಾರದು.

31ಆದರೆ ಸುತ್ತಲೂ ಗೋಡೆಗಳಿಲ್ಲದ ಹಳ್ಳಿಗಳಲ್ಲಿಯ ಮನೆಗಳು ದೇಶದ ಭೂಮಿಯೊಂದಿಗೆ ಲೆಕ್ಕಿಸಲ್ಪಡಬೇಕು. ಅವುಗಳಿಗೆ ಬಿಡುಗಡೆ ಇರಬೇಕು; ಸಂಭ್ರಮ ವರುಷದಲ್ಲಿ ಅವು ಬಿಡುಗಡೆಯಾಗಬೇಕು.

32ಇದಲ್ಲದೆ ಲೇವಿಯರ ಪಟ್ಟಣಗಳ ವಿಷಯವಾ ಗಿಯೂ ಅವರ ಸ್ವಾಸ್ತ್ಯವಾಗಿರುವ ಪಟ್ಟಣಗಳಲ್ಲಿನ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.

33ಲೇವಿಯರಿಂದ ಏನಾದರೂ ಕೊಂಡುಕೊಂಡರೆ ಕೊಂಡುಕೊಂಡ ಮನೆಯೂ ಅವನ ಸ್ವಾಸ್ತ್ಯದ ಪಟ್ಟಣವೂ ಸಂಭ್ರಮದ ವರುಷದಲ್ಲಿ ಬಿಡುಗಡೆಯಾಗ ಬೇಕು; ಲೇವಿಯರ ಪಟ್ಟಣಗಳ ಮನೆಗಳು ಇಸ್ರಾ ಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಾಗಿವೆ.

34ಆದರೆ ಅವರ ಪಟ್ಟಣಗಳಿಗೆ ಸೇರಿರುವ ಉಪ ನಗರಗಳ ಹೊಲವನ್ನು ಮಾರಬಾರದು. ಅದು ಅವರಿಗೆ ನಿತ್ಯವಾದ ಸ್ವಾಸ್ತ್ಯವೇ.

ಯಾಜಕಕಾಂಡ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी