೧ ಯೋಹಾನನು 2:22

ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 2

20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.

21ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.

22ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.

23ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ.

24ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.

೧ ಯೋಹಾನನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी