ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.
5ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು;
6ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು;
7ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.
8ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
9ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ