ಜೆಕರ್ಯ 9:15

ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.

ಸಂದರ್ಭದೊಂದಿಗೆ ಓದಿ · ಜೆಕರ್ಯ 9

13ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್‌ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.

14ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.

15ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.

16ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.

17ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.

ಜೆಕರ್ಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी