ಹೋಶೇ 2:14

ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.

ಸಂದರ್ಭದೊಂದಿಗೆ ಓದಿ · ಹೋಶೇ 2

12ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು.

13ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್‌ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.

14ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.

15ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.

16ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನೀನು ನನ್ನನ್ನು ಇನ್ನು ಮೇಲೆ ಬಾಳಿ ಎಂದು ಕರೆಯದೆ ಈಶೀ ಎಂದು ಕರೆಯುವಿ.

ಹೋಶೇ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी