ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.
12ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
13ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
14ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.
15ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ