೨ ಸಮುವೇಲನು 23:11

ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ. ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 23

9ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್‌ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.

10ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು.

11ಇವನ ತರುವಾಯ ಹರಾರ್ಯನಾಗಿರುವ ಆಗೇಯನ ಮಗನಾದ ಶಮ್ಮ. ಅಲಸಂದಿಯಿಂದ ತುಂಬಿದ ಹೊಲ ದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿ ಬಂದಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು.

12ಆದರೆ ಅವನು ಆ ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು.

13ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್‌ ತಗ್ಗಿನಲ್ಲಿ ಇಳಿ ದಿತ್ತು.

೨ ಸಮುವೇಲನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी