೨ ಸಮುವೇಲನು 17:12

ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 17

10ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.

11ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.

12ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ.

13ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು.

14ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.

೨ ಸಮುವೇಲನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी