ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
3ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ.
4ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
6ಓ ಕರ್ತನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸು.
7ನನ್ನ ಇಕ್ಕಟ್ಟಿನ ದಿವಸದಲ್ಲಿ ನಿನ್ನನ್ನು ಕರೆಯುವೆನು; ನೀನು ನನಗೆ ಉತ್ತರ ಕೊಡುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ