ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
1ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
2ಇಗೋ, ದುಷ್ಟರು ಬಿಲ್ಲು ಬೊಗ್ಗಿಸಿ ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವದಕ್ಕೆ ತಮ್ಮ ಬಾಣವನ್ನು ಬಿಲ್ಲಿಗೆ ಹೂಡಿ ಸಿದ್ಧಮಾಡುತ್ತಾರೆ.
3ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ