ಧರ್ಮೋಪದೇಶಕಾಂಡ 27:4

ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್‌ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 27

2ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ

3ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.

4ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್‌ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.

5ಅಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಬೇಕು ಅಂದರೆ ಕಲ್ಲಿನ ಬಲಿಪೀಠವನ್ನು ಕಟ್ಟಬೇಕು. ಆ ಕಲ್ಲುಗಳಿಗೆ ಕಬ್ಬಿಣದ ಆಯುಧ ತಗಲಿಸಬಾರದು.

6ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.

ಧರ್ಮೋಪದೇಶಕಾಂಡ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी