ಯೆಹೆಜ್ಕೇಲನು 23:33

ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 23

31ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.

32ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು.

33ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ.

34ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.

35ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು.

ಯೆಹೆಜ್ಕೇಲನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी