ಯೆರೆಮಿಯ 25:27

ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 25

25ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ

26ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.

27ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.

28ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು.

29ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.

ಯೆರೆಮಿಯ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी