ಆದಿಕಾಂಡ 4:13

ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 4

11ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.

12ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.

13ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.

14ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.

15ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.

ಆದಿಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी