ಅರಣ್ಯಕಾಂಡ 9:13

ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 9

11ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.

12ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.

13ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.

14ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.

15ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.

ಅರಣ್ಯಕಾಂಡ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी