ಯೆಹೆಜ್ಕೇಲನು 34:13

ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 34

11ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.

12ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.

13ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.

14ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.

15ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी