೧ ಸಮುವೇಲನು 2:18

ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 2

16ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.

17ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.

18ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.

19ಇದಲ್ಲದೆ ಅವನ ತಾಯಿ ಪ್ರತಿ ವರುಷದಲ್ಲೂ ವರುಷದ ಬಲಿಯನ್ನು ಅರ್ಪಿಸಲು ತನ್ನ ಗಂಡನ ಸಂಗಡ ಬರುವಾಗ ಅವನಿಗೆ ಒಂದು ಚಿಕ್ಕ ನಿಲುವಂಗಿಯನ್ನು ಮಾಡಿಕೊಂಡು ಬರುತಿದ್ದಳು.

20ಆಗ ಏಲಿಯು ಎಲ್ಕಾನನನ್ನೂ ಅವನ ಹೆಂಡತಿ ಯನ್ನೂ ಆಶೀರ್ವದಿಸಿ--ಕರ್ತನಿಗೆ ಸಲ್ಲಿಸಿದ್ದಕ್ಕೋಸ್ಕರ ಕರ್ತನು ಈ ಸ್ತ್ರೀಯಿಂದ ನಿನಗೆ ಸಂತಾನವನ್ನು ದಯ ಪಾಲಿಸಲಿ ಅಂದನು.

೧ ಸಮುವೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी