ಲೂಕನು 18:19

ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.

ಸಂದರ್ಭದೊಂದಿಗೆ ಓದಿ · ಲೂಕನು 18

17ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

18ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

19ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.

20ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.

21ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.

ಲೂಕನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी