ಯೆರೆಮಿಯ 51:5

ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 51

3ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.

4ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.

5ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.

6ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.

7ಬಾಬೆಲ್‌ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.

ಯೆರೆಮಿಯ 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी