ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
11ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.
12ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
13ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ