೧ ಸಮುವೇಲನು 8:14

ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 8

12ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.

13ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು.

14ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು.

15ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು.

16ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು.

೧ ಸಮುವೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी