ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
7ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
8ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.
9ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
10ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
11ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ