ಯೆಶಾಯ 30:17

ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 30

15ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.

16ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.

17ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.

18ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.

ಯೆಶಾಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी