ಆದಿಕಾಂಡ 41:49

ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 41

47ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.

48ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.

49ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟುಬಿಟ್ಟನು. ಯಾಕಂದರೆ ಅದನ್ನು ಲೆಕ್ಕಮಾಡುವದಕ್ಕೆ ಆಗದೆ ಹೋಯಿತು.

50ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್‌ ಅವರನ್ನು ಯೋಸೇಫನಿಗೆ ಹೆತ್ತಳು.

51ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.

ಆದಿಕಾಂಡ 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी