ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
1ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
3ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ