ಯೆರೆಮಿಯ 8:11

ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?

ಸಂದರ್ಭದೊಂದಿಗೆ ಓದಿ · ಯೆರೆಮಿಯ 8

9ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?

10ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.

11ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?

12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.

13ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.

ಯೆರೆಮಿಯ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी