ಹೋಶೇ 7:11

ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.

ಸಂದರ್ಭದೊಂದಿಗೆ ಓದಿ · ಹೋಶೇ 7

9ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.

10ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.

11ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.

12ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.

13ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.

ಹೋಶೇ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी