೨ ಪೂರ್ವಕಾಲವೃತ್ತಾಂತ 10:16

ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 10

14ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.

15ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.

16ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.

17ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು.

18ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು.

೨ ಪೂರ್ವಕಾಲವೃತ್ತಾಂತ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी