ಆದಿಕಾಂಡ 23:13

ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 23

11ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.

12ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು.

13ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.

14ಆಗ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--

15ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್‌ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.

ಆದಿಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी