೧ ಅರಸುಗಳು 12:13

ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ--

ಸಂದರ್ಭದೊಂದಿಗೆ ಓದಿ · ೧ ಅರಸುಗಳು 12

11ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು.

12ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.

13ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ--

14ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.

15ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.

೧ ಅರಸುಗಳು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी