ವಿಮೋಚನಕಾಂಡ 29:28

ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್‌ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 29

26ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು.

27ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು.

28ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್‌ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.

29ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು.

30ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.

ವಿಮೋಚನಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी