೨ ಕೊರಿಂಥದವರಿಗೆ 10:15

ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 10

13ನಾವಾದರೊ ಮೇರೆ ತಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ಹಂಚಿಕೊಟ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ; ಈ ಮೇರೆ ಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ.

14ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ನಿಮ್ಮ ಬಳಿಗೆ ಬಂದ ನಾವು ನಿಮ್ಮನ್ನು ತಲುಪಲಿಲ್ಲವೋ ಎಂಬಂತೆ ಮೇರೆಯನ್ನು ಅತಿಕ್ರಮಿಸಿದವರಲ್ಲ.

15ನಾವು ಮೇರೆತಪ್ಪಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತಕ್ಕೊಂಡು ಇವು ನಮ್ಮವು ಎಂದು ಹೊಗಳಿಕೊಳ್ಳುವವರಲ್ಲ; ಆದರೆ ನಿಮ್ಮ ನಂಬಿಕೆಯು ಹೆಚ್ಚಿದ ಹಾಗೆಲ್ಲಾ ನಿಮ್ಮ ಮೂಲಕ ನಮ್ಮ ಮೇರೆಯೊಳಗೆ ಇನ್ನೂ ಅಭಿವೃದ್ಧಿ ಹೊಂದುವೆವು;

16ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.

17ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.

೨ ಕೊರಿಂಥದವರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी