ಬೆನ್ಯಾವಿಾನನು ತೋಳದಂತೆ ಸೀಳುವನು. ಬೆಳಿಗ್ಗೆ ಸುಲಿಗೆಯನ್ನು ತಿಂದುಬಿಡುವನು. ಸಾಯಂಕಾಲದಲ್ಲಿ ಕೊಳ್ಳೆಯನ್ನು ಪಾಲುಮಾಡುವನು.
25ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.)
26ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
27ಬೆನ್ಯಾವಿಾನನು ತೋಳದಂತೆ ಸೀಳುವನು. ಬೆಳಿಗ್ಗೆ ಸುಲಿಗೆಯನ್ನು ತಿಂದುಬಿಡುವನು. ಸಾಯಂಕಾಲದಲ್ಲಿ ಕೊಳ್ಳೆಯನ್ನು ಪಾಲುಮಾಡುವನು.
28ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
29ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ