ಯೆಹೆಜ್ಕೇಲನು 27:31

ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 27

29ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,

30ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;

31ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.

32ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?

33ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ.

ಯೆಹೆಜ್ಕೇಲನು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी