೨ ಸಮುವೇಲನು 4:9

ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 4

7ಅವರು ಮನೆಯೊಳಗೆ ಪ್ರವೇಶಿಸಿದಾಗ ಅವನು ಮಲಗುವ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು; ಇವರು ಅವನನ್ನು ಹೊಡೆದು ಕೊಂದುಹಾಕಿ ತಲೆಯನ್ನು ಕಡಿದು ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು

8ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು.

9ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ

10ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು.

11ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.

೨ ಸಮುವೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी