೧ ಸಮುವೇಲನು 12:16

ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 12

14ನೀವು ಕರ್ತನ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಕರ್ತನಿಗೆ ಭಯಪಟ್ಟು ಆತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾದರೆ ನೀವೂ ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಕರ್ತನನ್ನು ತಪ್ಪದೆ ಹಿಂಬಾಲಿಸುವಿರಿ.

15ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು.

16ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ದೊಡ್ಡ ಕಾರ್ಯ ವನ್ನು ನೋಡಿರಿ.

17ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.

18ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.

೧ ಸಮುವೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी