ಯೆರೆಮಿಯ 32:40

ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 32

38ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.

39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.

40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.

41ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.

42ಕರ್ತನು ಹೀಗೆ ಹೇಳುತ್ತಾನೆ--ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ ಹಾಗೆಯೇ ನಾನು ಅವರಿಗೆ ವಾಗ್ದಾನದ ಮೇಲನ್ನೆಲ್ಲಾ ಅವರ ಮೇಲೆ ಬರಮಾಡುವೆನು.

ಯೆರೆಮಿಯ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी