ಕಳುಹಿಸಲ್ಪಟ್ಟವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಆಳು ಸ್ವಸ್ಥನಾಗಿರುವದನ್ನು ಕಂಡರು.
8ನಾನು ಸಹ ಅಧಿಕಾರದ ಕೆಳಗಿರುವವನು; ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ--ಹೋಗು ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ನನ್ನ ಸೇವಕನಿಗೆ--ಇದನ್ನು ಮಾಡು ಅಂದರೆ ಅವನು ಅದನ್ನು ಮಾಡುತ್ತಾನೆ ಎಂದು ಹೇಳಿ ಕಳುಹಿಸಿ
9ಯೇಸು ಇವುಗಳನ್ನು ಕೇಳಿದಾಗ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತಿರುಗಿಕೊಂಡು ತನ್ನನ್ನು ಹಿಂಬಾಲಿಸು ತ್ತಿದ್ದವರಿಗೆ--ಇಂಥ ದೊಡ್ಡ ನಂಬಿಕೆಯನ್ನು ನಾನು ಇಸ್ರಾಯೇಲಿನಲ್ಲಿ ಸಹ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.
10ಕಳುಹಿಸಲ್ಪಟ್ಟವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಆಳು ಸ್ವಸ್ಥನಾಗಿರುವದನ್ನು ಕಂಡರು.
11ಇದಾದ ಮೇಲೆ ಮಾರಣೆಯ ದಿನ ಆತನು ನಾಯಿನೆಂಬ ಪಟ್ಟಣಕ್ಕೆ ಹೋದನು. ಆಗ ಆತನ ಶಿಷ್ಯರಲ್ಲಿ ಅನೇಕರೂ ಬಹು ಜನರೂ ಆತನ ಸಂಗಡ ಹೋದರು.
12ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ