೧ ಸಮುವೇಲನು 2:34

ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 2

32ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ.

33ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.

34ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.

35ಆದರೆ ನನ್ನ ಹೃದಯಕ್ಕೂ ನನ್ನ ಮನಸ್ಸಿಗೂ ಸಮ ರ್ಪಕವಾದ ಹಾಗೆ ಮಾಡುವ ನಂಬಿಕೆಯಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ ಅವನಿಗೆ ಸ್ಥಿರ ವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ನಡೆದುಕೊಳ್ಳುವನು.

36ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.

೧ ಸಮುವೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी