೨ ಸಮುವೇಲನು 20:3

ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 20

1ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.

2ಇಸ್ರಾಯೇಲ್‌ ಜನರೆಲ್ಲರು ದಾವೀದನನ್ನು ಬಿಟ್ಟು ಸರಿದು ಬಿಕ್ರೀಯ ಮಗನಾದ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನ ವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.

3ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.

4ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.

5ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು.

೨ ಸಮುವೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी