ಯೆಹೆಜ್ಕೇಲನು 36:24

ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 36

22ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.

23ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

24ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.

25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

26ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.

ಯೆಹೆಜ್ಕೇಲನು 36 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी