ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.
8ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
9ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
10ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.
11ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು.
12ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ