ಅಪೊಸ್ತಲರ ಕೃತ್ಯಗಳು 26:2

ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 26

1ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--

2ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.

3ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.

4ನಾನು ಮೊದಲಿನಿಂದಲೂ ಯೆರೂಸಲೇಮಿನಲ್ಲಿರುವ ನನ್ನ ಸ್ವಂತ ಜನಾಂಗದವರ ಮಧ್ಯದಲ್ಲಿ ಬಾಲ್ಯದಿಂದ ನಾನು ಬದುಕಿದ ವಿಧಾನವು ಎಲ್ಲಾ ಯೆಹೂದ್ಯರಿಗೆ ತಿಳಿದದೆ.

ಅಪೊಸ್ತಲರ ಕೃತ್ಯಗಳು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी