ನ್ಯಾಯಸ್ಥಾಪಕರು 11:27

ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್‌ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 11

25ಈಗ ಚಿಪ್ಪೋರನ ಮಗನೂ ಮೋವಾ ಬಿನ ಅರಸನೂ ಆದ ಬಾಲಾಕನಿಗಿಂತ ಯಾವದ ರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿನ ವಿರೋಧವಾಗಿ ಯಾವಾಗಲಾದರೂ ವಿವಾದ ಮಾಡಿದನೋ? ಯಾವಾಗಲಾದರೂ ಅವರಿಗೆ ವಿರೋಧವಾಗಿ ಯುದ್ಧಮಾಡಿದನೋ?

26ಇಸ್ರಾಯೇಲು ಹೆಷ್ಬೋನಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರೋಯೇರಿನಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ಅರ್ನೋನಿನ ತೀರವಾದ ಎಲ್ಲಾ ಪಟ್ಟಣ ಗಳಲ್ಲಿಯೂ ಮುನ್ನೂರು ವರುಷಗಳಿಂದ ವಾಸಿಸಿರು ವಾಗ ಇಷ್ಟರ ವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?

27ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್‌ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ.

28ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು.

29ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್‌ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.

ನ್ಯಾಯಸ್ಥಾಪಕರು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी